ಕಾನೂನನ್ನು ಪಾಲಿಸುವವನು ಸಂತೋಷವಾಗಿರುತ್ತಾನೆ

1. ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.

2. ನೀತಿವಂತರು ಅಧಿಕಾರದಲ್ಲಿ ದ್ದಾಗ ಜನರು ಹರ್ಷಿಸುತ್ತಾರೆ; ದುಷ್ಟನು ಆಳಿದರೆ ಜನರು ಶೋಕಿಸುತ್ತಾರೆ.

3. ಜ್ಞಾನವನ್ನು ಪ್ರೀತಿಸುವವನು ತನ್ನ ತಂದೆಯನ್ನು ಹರ್ಷಗೊಳಿಸುತ್ತಾನೆ; ವೇಶ್ಯೆಯ ರೊಂದಿಗೆ ಸಹವಾಸ ಮಾಡುವವನು ತನ್ನ ಆಸ್ತಿಯನ್ನು ವೆಚ್ಚಮಾಡುತ್ತಾನೆ.

4. ನ್ಯಾಯತೀರ್ಪಿನಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ; ಲಂಚಗಳನ್ನು ಸ್ವೀಕರಿಸು ವವನು ಅದನ್ನು ಕೆಡವಿಹಾಕುತ್ತಾನೆ.

5. ತನ್ನ ನೆರೆಯವ ನನ್ನು ಮುಖಸ್ತುತಿ ಮಾಡುವವನು ಅವನ ಪಾದಗಳಿಗೆ ಬಲೆಯನ್ನು ಒಡ್ಡುತ್ತಾನೆ.

6. ಕೆಟ್ಟವನ ದೋಷದಲ್ಲಿ ಉರ್ಲು ಇದೆ; ನೀತಿವಂತನು ಹಾಡಿ ಹರ್ಷಿಸುತ್ತಾನೆ.

7. ಬಡವರ ನಿಮಿತ್ತ ನೀತಿವಂತನು ಯೋಚಿಸುತ್ತಾನೆ; ದುಷ್ಟನು ಅದನ್ನು ತಿಳುಕೊಳ್ಳುವಂತೆ ಲಕ್ಷ್ಯಕ್ಕೆ ತರುವ ದಿಲ್ಲ.

8. ಪರಿಹಾಸ್ಯಗಾರರು ಪಟ್ಟಣಕ್ಕೆ ಉರ್ಲನ್ನು ಒಡ್ಡು ತ್ತಾರೆ; ಜ್ಞಾನಿಗಳು ಕೋಪವನ್ನು ತಿರುಗಿಸುವರು.

9. ಜ್ಞಾನಿಯು ಬುದ್ಧಿಹೀನನೊಂದಿಗೆ ವ್ಯಾಜ್ಯ ಮಾಡಿ ದರೆ ಅವನು ರೇಗಿದರೂ ನಕ್ಕರೂ ಶಮನವಾಗುವು ದಿಲ್ಲ.

10. ಕೊಲೆಪಾತಕರು ನೀತಿವಂತರನ್ನು ದ್ವೇಷಿಸು ತ್ತಾರೆ; ಯಥಾರ್ಥವಂತರು ಅವನ ಪ್ರಾಣವನ್ನು ಹುಡು ಕುತ್ತಾರೆ.

11. ಮೂಢನು ತನ್ನ ಮನಸ್ಸನ್ನೆಲ್ಲಾ ಹೊರ ಪಡಿಸುತ್ತಾನೆ; ಜ್ಞಾನಿಯು ಅದನ್ನು ಕಾಯುತ್ತಾನೆ.

12. ಸುಳ್ಳಿಗೆ ಕಿವಿಗೊಡುವ ಅಧಿಕಾರಿಗೆ ಕಿವಿಗೊಟ್ಟರೆ ಅವನ ಸೇವಕರೆಲ್ಲರೂ ದುಷ್ಟರೇ.

13. ಬಡವರೂ ಮೋಸಗಾರರೂ ಒಟ್ಟಾಗಿ ಸಂಧಿಸುತ್ತಾರೆ; ಕರ್ತನು ಅವರಿಬ್ಬರ ಕಣ್ಣುಗಳನ್ನು ಬೆಳಗಿಸುತ್ತಾನೆ.

14. ಬಡವರಿಗೆ ನಂಬಿಕೆಯಿಂದ ನ್ಯಾಯತೀರಿಸುವ ಅರಸನ ಸಿಂಹಾ ಸನವು ಎಂದೆಂದಿಗೂ ಸ್ಥಿರಗೊಳ್ಳುವದು.

15. ಬೆತ್ತ ಬೆದ ರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ.

16. ದುಷ್ಟರು ವೃದ್ಧಿಯಾದಾಗ ದೋಷವು ಹೆಚ್ಚುತ್ತದೆ; ನೀತಿವಂತರು ಅವರ ಬೀಳುವಿಕೆಯನ್ನು ಕಣ್ಣಾರೆ ನೋಡುವರು.

17. ನಿನ್ನ ಮಗನನ್ನು ಶಿಕ್ಷಿಸಿದರೆ ಅವ ನಿಂದ ನಿನಗೆ ನೆಮ್ಮದಿಯಾಗುವದು; ಹೌದು, ಅವನು ನಿನ್ನ ಪ್ರಾಣಕ್ಕೆ ಆನಂದವನ್ನುಂಟು ಮಾಡುವನು.

18. ದರ್ಶನವಿಲ್ಲದಿರುವಲ್ಲಿ ಜನರು ನಾಶವಾಗುತ್ತಾರೆ; ನ್ಯಾಯಪ್ರಮಾಣವನ್ನು ಕೈಕೊಳ್ಳುವವನು ಧನ್ಯನು.

19. ಮಾತುಗಳಿಂದ ಸೇವಕನು ಶಿಕ್ಷಿಸಲ್ಪಡುವದಿಲ್ಲ; ಅವನು ತಿಳಿದುಕೊಂಡರೂ ಉತ್ತರಿಸುವದಿಲ್ಲ.

20. ತನ್ನ ಮಾತುಗಳಲ್ಲಿ ದುಡುಕುವವನನ್ನು ನೀನು ನೋಡಿದ್ದೀಯೋ? ಅವನಿಗಿಂತಲೂ ಬುದ್ದಿಹೀನನ ವಿಷಯ ದಲ್ಲಿ ಹೆಚ್ಚು ನಿರೀಕ್ಷೆ ಇದೆ.

21. ಬಾಲ್ಯದಿಂದ ತನ್ನ ಸೇವಕನನ್ನು ಕೋಮಲವಾಗಿ ಸಾಕುವವನು ತರುವಾಯ ತನಗೆ ಮಗನಂತೆ ಆಗುವನು.

22. ಕೋಪಿಷ್ಠನು ಜಗಳ ವನ್ನೆಬ್ಬಿಸುತ್ತಾನೆ; ರೋಷಗೊಂಡವನು ದೋಷದಲ್ಲಿ ತುಂಬಿರುತ್ತಾನೆ.

23. ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.

24. ಕಳ್ಳರೊಂದಿಗೆ ಪಾಲು ಗಾರನು ತನ್ನನ್ನು ತಾನೇ ಹಗೆಮಾಡುತ್ತಾನೆ; ಅವನು ಶಾಪವನ್ನು ಕೇಳಿತಿಳಿಸುವದಿಲ್ಲ.

25. ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.

26. ಅನೇಕರು ಅಧಿ ಪತಿಯ ದಯೆಯನ್ನು ಹುಡುಕುತ್ತಾರೆ; ಕರ್ತನಿಂದಲೇ ಪ್ರತಿಯೊಬ್ಬನ ನ್ಯಾಯತೀರ್ಪು ಬರುತ್ತದೆ.

27. ಅನೀತಿ ವಂತನು ನೀತಿವಂತರಿಗೆ ಅಸಹ್ಯ; ತನ್ನ ಮಾರ್ಗದಲ್ಲಿ ಯಥಾರ್ಥವಾಗಿರುವವನು ದುಷ್ಟರಿಗೆ ಅಸಹ್ಯ.

Bibles

Books

Chapters